Live Stream

[ytplayer id=’22727′]

| Latest Version 8.0.1 |

Politics News

ಅಪಪ್ರಚಾರಕರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ: ಶಾಸಕ ಅಶ್ವಥ್ ನಾರಾಯಣ್ ಆಗ್ರಹ

ಅಪಪ್ರಚಾರಕರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ: ಶಾಸಕ ಅಶ್ವಥ್ ನಾರಾಯಣ್ ಆಗ್ರಹ

ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿರುವವರ ಮೇಲೆ ಸ್ವಯಂಪ್ರೇರಿತ ಕೇಸ್ ಹಾಕ್ಬೇಕು ಎಂದು ಬಿಜೆಪಿ ಶಾಸಕ ಮಾಜಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಧರ್ಮಸ್ಥಳ ಅಸಹಜ ಸಾವು ಪ್ರಕರಣ ಸದನದಲ್ಲಿ ಉತ್ತರ ಕೊಡುವ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಇವತ್ತು ಸದನದಲ್ಲಿ ಗೃಹ ಸಚಿವರು, ಸಿಎಂ, ಡಿಸಿಎಂ ಸದನದಲ್ಲಿ ಉತ್ತರ ಕೊಡಬೇಕಿದೆ. ಧರ್ಮಸ್ಥಳ ಪ್ರಕರಣದಲ್ಲಿ ಬಹಳ ಸ್ಪಷ್ಟವಾಗಿ ಉತ್ತರ ಕೊಡಲಿ. ಅನಾಮಿಕ ವ್ಯಕ್ತಿಯ ಬಗ್ಗೆಯು ತನಿಖೆ ಆಗಲಿ ಎಂದು ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಅವರ ಮೇಲೆ ಸ್ವಯಂಪ್ರೇರಿತ ಕೇಸ್ ಹಾಕಬೇಕಿದೆ, ಹಿಂದೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್‍ನವರು ಕಾರಣ ಇಲ್ಲದೇ ಸುಮೋಟೋ ಕೇಸ್ ಹಾಕ್ತಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿರುವವರ ಮೇಲೆ ಕೇಸ್ ಹಾಕಬೇಕು. ಪ್ರಕರಣದಲ್ಲಿ ಷಡ್ಯಂತ್ರ ಏನಾಗಿದೆ ಎಂದು ಹೇಳಬೇಕು. ಗಾಳಿಯಲ್ಲಿ ತೇಲಿಸುವ ಕೆಲಸ ಆಗಬಾರದು ಎಂದು ಆಗ್ರಹಿಸಿರುವರು.
ಅನಾಮಿಕ ವ್ಯಕ್ತಿಯು ಸುಪ್ರೀಂ ಕೋಟ್ರ್ಗೆ ಲಾಯರ್‍ಗಳನ್ನ ಇಟ್ಟುಕೊಂಡಿದ್ದು, ಇಷ್ಟ ಬಂದ ಹಾಗೆ ಕಥೆಯನ್ನ ಸೃಷ್ಟಿ ಮಾಡ್ತಿದ್ದಾರೆ. ಅನಾಮಿಕ ವ್ಯಕ್ತಿಯ ಮೂಲಕ ಸುಳ್ಳನ್ನೆ ಸತ್ಯವನ್ನಾಗಿ ಮಾಡಲು ಹೊರಟಿದ್ದಾರೆ. ಇದನ್ನ ಪಿಎಫ್‍ಐ, ಎಸ್‍ಡಿಪಿಐ ಮಾಡ್ತಿದೆ. ಅನಾಮಿಕ ವ್ಯಕ್ತಿ ಹಾಗೂ ಆತನ ಹಿಂದಿರುವ ವ್ಯಕ್ತಿಯ ಬಗ್ಗೆ ತನಿಖೆಯಾಗಲಿ ಎಂದು ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದ್ದಾರೆ.

ವೀ ಕೇ ನ್ಯೂಸ್
";