ಬೆಂಗಳೂರು: ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ಅವರ 75 ನೇ ಜನ್ಮದಿನದ (Modi Birthday) ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನದಡಿ ಶಿವಮೊಗ್ಗದಲ್ಲಿ (Shivamogga) ಯುವ ಮೋರ್ಚಾ ವತಿಯಿಂದ ಆಯೋಜಿಸಲಾದ ‘ನಶಾಮುಕ್ತ ಭಾರತಕ್ಕಾಗಿ’ “ನಮೋ ಯುವ ರನ್ ಬೃಹತ್ ಮ್ಯಾರಥಾನ್”(YUVA RUN MARATHON)ಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ವಿಜಯೇಂದ್ರ ಯಡಿಯೂರಪ್ಪ ಅವರು ಚಾಲನೆ ನೀಡಿದರು.


ಸಂಸದ ಬಿ. ವೈ. ರಾಘವೇಂದ್ರ, (B.Y.RAGHAVENDRA) ಶಾಸಕ ಅರಗ ಜ್ಞಾನೇಂದ್ರ, ಚನ್ನಬಸಪ್ಪ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು, ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಶಾಸಕರಾದ ಆರ್. ಕೆ. ಸಿದ್ದರಾಮಣ್ಣ, ಕುಮಾರಸ್ವಾಮಿ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ, ಚಲನಚಿತ್ರ ಕಲಾವಿದರಾದ ಕು. ಕಾರುಣ್ಯ ರಾಮ್, ಗೌರಿಶಂಕರ್, ಅಂತರರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಸೌಮ್ಯ ಸಾವಂತ್, ಜಿಲ್ಲಾಧ್ಯಕ್ಷ ಜಗದೀಶ್, ಪ್ರಮುಖರು, ಪಕ್ಷದ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.




















