ಬೆಂಗಳೂರು, ಆಗಸ್ಟ್ 18, (ಕರ್ನಾಟಕ ವಾರ್ತೆ): ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಶುಲ್ಕ ಪಾವತಿ ಮಾಡಿದ ನಂತರ ಪ್ರವೇಶಾತಿ ಸಂರ್ಭದಲ್ಲಿ ಕೆಲವು ಖಾಸಗಿ ವಿಶ್ವವಿದ್ಯಾಲಯಗಳು ಹೆಚ್ಚುವರಿ ಶುಲ್ಕ ವಸೂಲಾತಿ ಮಾಡಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದರು
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಶುಲ್ಕ ಪಾವತಿ ಮಾಡಿದ ನಂತರ ಪ್ರವೇಶಾತಿ ಸಂರ್ಭದಲ್ಲಿ ಕೆಲವು ಖಾಸಗಿ ವಿಶ್ವವಿದ್ಯಾಲಯಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ಯೂನಿವರ್ಸಿಟಿ ಶುಲ್ಕವನ್ನು ಪಾವತಿಸುವಂತೆ ಒತ್ತಾಯಿಸುತ್ತಿರುವುದಾಗಿ ಇಬ್ಬರು ಅಭ್ಯರ್ಥಿಗಳು ವಿಶ್ವವಿದ್ಯಾಲಯಗಳ ವಿರುದ್ಧ ಹಿಂದಿನ ಶೈಕ್ಷಣಿಕ ಸಾಲುಗಳಲ್ಲಿ, ಅಧ್ಯಕ್ಷರು, ಶುಲ್ಕ ನಿಯಂತ್ರಣ ಸಮಿತಿ ಇವರಿಗೆ CMR University, Hennur, Bagalur Main Road, Bangalore, ಮತ್ತು Sharanabasava University, Kalaburgi ವಿರುದ್ದ ದೂರನ್ನು ಸಲ್ಲಿಸಿದ್ದರು. ಈ ಪ್ರಕರಣಗಳಲ್ಲಿ ವಿಚಾರಣೆ ನಡೆಸಿ, ಹೆಚ್ಚುವರಿಯಾಗಿ ಪಾವತಿಸಿರುವ ಶುಲ್ಕವನ್ನು ಅಭ್ಯರ್ಥಿಗಳಿಗೆ ಮರುಪಾವತಿಸಲು/ಮುಂದಿನ ಸಾಲಿಗೆ ಮರು ಹೊಂದಾಣಿಕೆ ಮಾಡಿಕೊಳ್ಳಲು ಆದೇಶ ಹೊರಡಿಸಲಾಗಿದೆ.
ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನೊಂದಣಿ ಶುಲ್ಕವಾಗಿ ರೂ.10,610 ನಿಗಧಿಪಡಿಸಿರುತ್ತದೆ. ಸರ್ಕಾರದಿಂದ ನಿಗಧಿಪಡಿಸಿರುವ ನಿಗಧಿಪಡಿಸಿರುವ ಬೋಧನಾ ಶುಲ್ಕ. ಅಭಿವೃದ್ಧಿ ಶುಲ್ಕ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ನೊಂದಣಿ ಶುಲ್ಕವನ್ನು ಒಳಗೊಂಡಂತೆ ವಿಶ್ವವಿದ್ಯಾಲಯವಾರು ಖಾಸಗಿ ವಿಶ್ವವಿದ್ಯಾಲಯಗಳ ಸರ್ಕಾರಿ ಕೋಟಾದ ಶೇ.40 ರಷ್ಟು ಸೀಟುಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪಾವತಿಸಬೇಕಾಗಿರುತ್ತದೆ.
CET ಮುಂದುವರಿದು, ಹೆಚ್ಚುವರಿ ಶುಲ್ಕದ ವಸೂಲಾತಿ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ, ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಮೂಲಕ ಆಯ್ಕೆಯಾಗಿ ಪ್ರವೇಶಾತಿ ಪಡೆಯುವ ಸಂದರ್ಭದಲ್ಲಿ ನಿಗಧಿಪಡಿಸುವ ಶುಲ್ಕದ ವಿವರಗಳನ್ನು ವಿಶ್ವವಿದ್ಯಾಲಯದ (Website) ಅಪ್ಲೋಡ್ ಮಾಡಲು ಎಲ್ಲಾ ಖಾಸಗಿ ವಿಶ್ವವಿದ್ಯಾಲಯಗಳು ಕುಲಸಚಿವರಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಿಂದ ದಿನಾಂಕ: :04.08.2025 ರಲ್ಲಿ ಸುತ್ತೋಲೆ ಮೂಲಕ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.