ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರ. ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ, ಬೆಂಗಳೂರು ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕ ಶಿಬಿರವನ್ನು ಜುಲೈ 16 ರಂದು ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿರುವ ಜಿಟಿಟಿಸಿ ಕಟ್ಟಡದ ಡಾ ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಉದ್ಯಮಶೀಲತೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು / ಪೆÇ್ರೀತ್ಸಾಹ, ಯೋಜನೆಗಳ ಆಯ್ಕೆ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಬಗ್ಗೆ ಮಾಹಿತಿ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.
ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದು. ಭಾಗವಹಿಸುವವರು ಕನಿಷ್ಠ 18 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿರಬೇಕು ಹಾಗೂ ಕನಿಷ್ಠ ಹತ್ತನೇ ತರಗತಿ ವ್ಯಾಸಂಗ ಮಾಡಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಹತ್ತಿರ, ರಾಜಾಜಿನಗರ ಕೈಗಾರಿಕ ಪ್ರದೇಶ, ರಾಜಾಜಿನಗರ ಇವರನ್ನು ಮೊಬೈಲ್ ಸಂಖ್ಯೆ: 9008175702/ 9448413948 / 7760145784 ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಬೆಂಗಳೂರಿನ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.