ಬ್ಯಾಂಕ್ ಸಹಕಾರ ತತ್ವದ ಮೇಲೆ ಕಾರ್ಯನಿರ್ವಹಿಸುತ್ತಿದ್ದು, ಸದಸ್ಯರ ಹಿತಾಸಕ್ತಿಗಾಗಿ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ. ಸದಸ್ಯರ ವಿಕಲಚೇತನ ಮಕ್ಕಳಿಗೆ ಉಚಿತ ಪಿಯುಸಿ ಮತ್ತು ಪದವಿ ವಿದ್ಯಾಭ್ಯಾಸ, ಉಚಿತ ಆರೋಗ್ಯ ತಪಾಸಣೆ, ವಿಮಾ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮನೆ ನಿರ್ಮಿಸುವವರಿಗೆ ಸುಲಭವಾಗಿ ಸಾಲ ಸೌಲಭ್ಯ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ. ಆರ್.ಬಿ.ಐ ನಿಯಮಗಳನ್ನು ಸರಳೀಕರಣಗೊಳಿಸಿರುವುದರಿಂದ ಮುಂದಿನ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ಸಂಪೂರ್ಣ ಡಿಜಿಟಲೀಕರಣವಾಗುತ್ತಿದೆ. ಮೊಬೈಲ್ ಬ್ಯಾಂಕಿಂಗ್, ಎಟಿಎಮ್ ಕಾರ್ಡ್ ವಿತರಣೆ ಸೇರಿದಂತೆ ಜನಸ್ನೇಹಿ ಸೇವೆಗಳನ್ನು ವಿಸ್ತರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ನಿರ್ದೇಶಕರಾದ ವೆಂಕಟಾಚಲಪತಿ, ಬಿ.ಎಲ್.ಪಿ. ರುದ್ರಮೂರ್ತಿ, ನಾಗಭೂಷಣ್, ಎಸ್. ಸತ್ಯಮೂರ್ತಿ, ಎಂ.ಸಿ. ಫಾಲನೇತ್ರ, ಲೋಹಿತ್ ಜಿ. ನಂಜೇಗೌಡ, ಪಿ.ಕೆ. ರವೀಂದ್ರ, ಎನ್. ಮಹಾಲಕ್ಷ್ಮಿ, ಎಚ್. ಮಾರುತಿ, ಅನ್ನಪೂರ್ಣಮ್ಮ, ರಚನಾ ಎಸ್, ಜಯಲಕ್ಷ್ಮಿ ಜಿ. ತೋಟಗೇರ, ಪ್ರಭಾರ ಪ್ರಧಾನ ವ್ಯವಸ್ಥಾಪಕ ಕೆ.ಎನ್. ಕೃಷ್ಣಯ್ಯ ಶೆಟ್ಟಿ, ಪೂರ್ಣಾವಧಿ ಸಲಹೆಗಾರ ಬಿ.ಆರ್. ನಾಗರಾಜ್ ಉಪಸ್ಥಿತರಿದ್ದರು.