ಬೆಂಗಳೂರು ನಗರ ಜಿಲ್ಲೆ, ಜೂ.13 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜೈನ್ ಸಮುದಾಯದ ಬಸದಿಗಳಲ್ಲಿರುವ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಆರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ ನೀಡಲು ನಿಗಧಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಫಲಾನುಭವಿಗಳು ಬೆಂಗಳೂರು ನಗರ ಜಿಲ್ಲೆಯ ಜೈನ್ ಬಸದಿಗಳು ಕರ್ನಾಟಕ ರಾಜ್ಯದಲ್ಲಿನ ಸಂಘಗಳ ನೋಂದಣಿ ಕಾಯ್ದೆಯಡಿ ನೋಂದಣಿಯಾಗಿರಬೇಕು. ಪ್ರಧಾನ ಗ್ರಂಥಿ/ಅರ್ಚಕರಿಗೆ ರೂ.8000/- ಮತ್ತು ಸಹಾಯಕ ಗ್ರಂಥಿ/ ಅರ್ಚಕರಿಗೆ ರೂ. 5000 ಮಾಸಿಕ ಗೌರವ ಧನ ನೀಡಲಾಗುವುದು.
ಅರ್ಹ ಅರ್ಚಕರುಗಳು ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಎರಡನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಅಂಬೇಡ್ಕರ್ ವೀಧಿ, ಬೆಂಗಳೂರು ಇಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಜೂನ್ 20 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಅಥವಾ ದೂರವಾಣಿ: 080-22866718 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರ





















