Live Stream

[ytplayer id=’22727′]

| Latest Version 8.0.1 |

Bengaluru Urban

ಜಯನಗರ ರಾಯರ ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು, ಅನ್ನದಾನ ಸೇವೆ ಮತ್ತು ನೃತ್ಯ ಸೇವೆ 

ಜಯನಗರ ರಾಯರ ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು, ಅನ್ನದಾನ ಸೇವೆ ಮತ್ತು ನೃತ್ಯ ಸೇವೆ 
ಬೆಂಗಳೂರು : ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಆ.28 ರಂದು ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಮಹಾಮಂಗಳಾರತಿ, ಅನ್ನದಾನ ಸೇವೆಗಳು ಜರುಗಿದವು.
ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ ಗಜವಾಹನೋತ್ಸವ ಪಲ್ಲಕ್ಕಿ ಉತ್ಸವ ತೊಟ್ಟಿಲು ಸೇವೆ, ಅಷ್ಟಾವಧಾನ ಸೇವೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭರತನಾಟ್ಯ ವಿದುಷಿ ಡಾ|| ವಿದ್ಯಾ ಎಸ್. ಅವರ ನಿರ್ದೇಶನದಲ್ಲಿ ನೃತ್ಯ ಲೋಕ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಏರ್ಪಡಿಸಿತ್ತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.
ವೀ ಕೇ ನ್ಯೂಸ್
";