ಬೆಂಗಳೂರು, ಸೆಪ್ಟೆಂಬರ್ 03, (ಕರ್ನಾಟಕ ವಾರ್ತೆ): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕøತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ-2025 ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕøತರಿಗೆ, ಮಲೆನಾಡ ಗಾಂಧಿ ಮತ್ತು ಮಾಜಿ ಸಚಿವ ಹೆಚ್.ಬಿ.ಗೋವಿಂದಗೌಡ ಪ್ರಶಸ್ತಿ ಪುರಸ್ಕøತ ಶಾಲೆಗಳಿಗೆ ಹಾಗೂ ನ್ಯಾಕ್ ಮಾನ್ಯತೆ ಪಡೆದ ಸರ್ಕಾರಿ ಕಾಲೇಜುಗಳಿಗೆ ಅಭಿನಂದನಾ ಪತ್ರ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ 5ರಂದು ಬೆಳಿಗ್ಗೆ 10.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದ ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್, ಕೇಂದ್ರ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಪರಿಷತ್‍ನ ಸಭಾಪತಿಗಳಾದ ಬಸವರಾಜ ಎಸ್.ಹೊರಟ್ಟಿ, ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.ಮಧು ಬಂಗಾರಪ್ಪ ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಚಿವರು, ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು ಸೇರಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಆಯುಕ್ತರು, ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳು ರಾಜ್ಯ ಮಟ್ಟದ ಎಲ್ಲಾ ಬೋಧಕ ವೃಂದದ ಸಂಘಗಳು, ಗುರು ವೃಂದ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರುತ್ತಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Veekay News > State News > ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
ವೀ ಕೇ ನ್ಯೂಸ್03/09/2025
posted on
