ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಿ ರಾಷ್ಟ್ರೀಯ ಚಿಹ್ನೆಗಳ ಗೌರವ ಕಾಪಾಡಬೇಕೆಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಂಗಳೂರಿನ ವಿವಿಧೆಡೆಗಳಲ್ಲಿ ಅಭಿಯಾನ ನಡೆಸಲಾಯಿತು.
ಅಭಿಯಾನದ ಅಂತರ್ಗತ  ಜಿಲ್ಲಾಧಿಕಾರಿಗಳ ಕಚೇರಿ, ತಾಲ್ಲೂಕು ಕಚೇರಿಗಳಲ್ಲಿ, 10ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಲ್ಲಿ  ಹಾಗೂ 80ಕ್ಕೂ ಅಧಿಕ ಶಾಲೆಗಳಲ್ಲಿ ಮನವಿ ಸಲ್ಲಿಸಲಾಯಿತು. 20ಕ್ಕೂ ಅಧಿಕ ಕಡೆಗಳಲ್ಲಿ ’ರಾಷ್ಟ್ರಧ್ವಜದ ಗೌರವ ಕಾಪಾಡಿ‘ ಈ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಪ್ರಭೋದನೆ ಮಾಡಲಾಯಿತು.
 
  
 
ಇದರ ಮೂಲಕ ಸಾವಿರಾರು ವಿದ್ಯಾರ್ಥಿಗಳು ಈ ಬಾರಿಯ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ಲಾಸ್ಟಿಕ್ ಧ್ವಜದ ಬಳಕೆ ಮಾಡುವುದಿಲ್ಲವೆಂದು ಪ್ರತಿಜ್ಞೆ ಸ್ವೀಕರಿಸಿದರು. ಈ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಹಾಗೂ ಧರ್ಮ ಪ್ರೇಮಿಗಳು ಉಪಸ್ಥಿತರಿದ್ದರು.

 
			

 
		



















 
    