ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಇಂದು ಮುಂಜಾನೆ ವಾಕ್ ಮಾಡುವ ಸಮಯದಲ್ಲಿ ತಲೆಸುತ್ತು ಉಂಟಾಗಿ ಚೆನ್ನೈನಲ್ಲಿ ಇರುವ ಅಪೊಲೊ ಆಸ್ಪತ್ರೆಗೆ ದಾಖಲೆಯಾಗಿದ್ದಾರೆ. ವೈದ್ಯರು ತಕ್ಷಣ ಪರೀಕ್ಷೆ ನಡೆಸಿದ್ದು, ಅಗತ್ಯವಾದ ಟೇಸ್ಟ್ಗಳನ್ನು ಮಾಡಲಾಗಿದೆ.
ಸಿಎಂ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರು ಆಧಿಕೃತ ಮಾಹಿತಿ ನೀಡುವ ನಿರೀಕ್ಷೆಯಿದ್ದು, ಅಭಿಮಾನಿಗಳು ಹಾಗೂ ವಿವಿಧ ರಾಜಕೀಯ ನಾಯಕರು ಅವರು ಬೇಗನೆ ಚೇತರಿಸಿಕೊಳ್ಳಲಿ ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ ಸರ್ಕಾರದ ಪ್ರಮುಖ ಕಾರ್ಯಾಚರಣೆಗಳಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಧಿಕಾರಿಗಳು ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ.