BENGALURU : ಕಾಡುಗೋಡಿ ಪೊಲೀಸ್ ಠಾಣಾ ಸರಹದ್ದಿನ ಹೆಚ್.ಎ.ಎಲ್ ಹತ್ತಿರ ವಾಸವಿರುವ ಪರ‍್ಯಾದುದಾರರು 29-04-2024 ರಂದು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
20-08-2025 ರಂದು ಚನ್ನಸಂದ್ರದ ಎಫ್.ಸಿ.ಐ ರಸ್ತೆ ಬಳಿ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ಆತನ ಸಹಚರನೊಂದಿಗೆ ಸೇರಿಕೊಂಡು ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ. ನಗರದ ವಿವಿಧ ಕಡೆಗಳಲ್ಲಿಯೂ ಸಹ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.
ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿ, ಕಳವು ಮಾಡಿದ ದ್ವಿ-ಚಕ್ರ ವಾಹನಗಳನ್ನು ಕಾಡುಗೋಡಿಯ ರೈಲ್ವೆ ನಿಲ್ದಾಣ ಹಾಗೂ ದಿಣ್ಣೂರು ಮುಖ್ಯ ರಸ್ತೆಯ ಮಸೀದಿ ಬಳಿ ಇರುವ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ತಿಳಿಸಿದ್ದು, 21-08-2025 ರಂದು 08 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.
ಪ್ರಕರಣದ ಆರೋಪಿಯ ವಶದಿಂದ ಒಟ್ಟು 09 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ ಅಂದಾಜು ರೂ. 5,80,000/-(ಐದು ಲಕ್ಷದ ಎಂಬತ್ತು ಸಾವಿರ ರೂಪಾಯಿ).
ಪ್ರಕರಣದ ಆರೋಪಿ ಬಂಧನದಿAದ 1) ಕಾಡುಗೋಡಿ ಪೊಲೀಸ್ ಠಾಣೆಯ-2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 2) ಹೆಚ್.ಎ.ಎಲ್ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 3) ಸರ್ಜಾಪುರ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, ಸೇರಿದಂತೆ 04 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಉಳಿದ 05 ದ್ವಿ-ಚಕ್ರ ವಾಹನಗಳ ಮಾಲೀಕರ ಪತ್ತೆ ಕಾರ್ಯ ಮುಂದುವರೆದಿದೆ. ಹಾಗೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಸಹಚರನು ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ.
ದಿನಾಂಕ:21/08/2025 ರಂದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ. ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತ ಕೆ.ಪರಶುರಾಮ್, ಐಪಿಎಸ್, ವೈಟ್‌ಫೀಲ್ಡ್ ಉಪ ವಿಭಾಗ, ಸಹಾಯಕ ಪೊಲೀಸ್ ಕಮಿಷನರ್, ಶ್ರೀಮತಿ ರೀನಾ ಸುವರ್ಣ, ವೈಟ್‌ಪೀಲ್ಡ್ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಕಾಡುಗೋಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ರಂಗಸ್ವಾಮಿ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.