Bengaluru : ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ (Commercial Tax Office) (ದಕ್ಷಿಣ ವಲಯ) ದ ಜಾರಿ ವಿಭಾಗದ ಅಧಿಕಾರಿಗಳು ಬೆಂಗಳೂರು ನಗರದ ಯಶವಂತಪುರ ರೈಲು ನಿಲ್ದಾಣದಲ್ಲಿ ವಿಸ್ತøತ ಶೋಧ ಕಾರ್ಯಾಚರಣೆ ನಡೆಸಿ, ಸೂಕ್ತ ತೆರಿಗೆ (TAX INVOICE) ಇನ್ವಾಯ್ಸ್‍ಗಳಿಲ್ಲದೆ ಸಾಗಿಸಲಾಗುತ್ತಿದ್ದ ದೊಡ್ಡ ಪ್ರಮಾಣದ ತಂಬಾಕು (Tobacco) ಪದಾರ್ಥಗಳನ್ನು ವಶಪಡಿಸಿಕೊಂಡಿದೆ.
ವಿಶ್ವಾಸಾರ್ಹ ಮೂಲಗಳಿಂದ ಲಭಿಸಿದ ಖಚಿತ ಮಾಹಿತಿಯ ಆಧಾರದಲ್ಲಿ, ದಕ್ಷಿಣ ವಲಯದ ಜಾರಿ ವಿಭಾಗದ ಅಧಿಕಾರಿಗಳ ತಂಡವು ತ್ವರಿತವಾಗಿ ನಿಲ್ದಾಣ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿತು. ಈ ಸಂದರ್ಭದಲ್ಲಿ ಕಮಲಾ ಪಸಂದ್ ಪಾನ್ ಮಸಾಲಾ, ಹನ್ಸ್ ಚಾಪ್, ಚೈನಿ ಫಿಲ್ಟರ್ ತಂಬಾಕು ಹಾಗೂ ಶಿಖರ್ ಪಾನ್ ಮಸಾಲಾ ಎಂಬ ಪ್ರಸಿದ್ಧ ಬ್ರ್ಯಾಂಡ್‍ಗಳ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ದೆಹಲಿಯಿಂದ ಬೆಂಗಳೂರಿಗೆ ರೈಲಿನ ಮೂಲಕ ಸಾಗಿಸಲಾಗಿದ್ದು, ಅವುಗಳನ್ನು ಕೆಲವು ಸರಕು ವಾಹನಗಳಲ್ಲಿ ಹಾಗೂ ನಿಲ್ದಾಣದ ಪ್ಲಾಟ್‍ಫಾರ್ಮ್‍ನಲ್ಲಿರುವ ಚೀಲಗಳಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ.
ಪರಿಶೀಲನೆಯ ಸಂದರ್ಭದಲ್ಲಿ ಜಾರಿ ವಿಭಾಗದ ಅಧಿಕಾರಿಗಳು ಒಟ್ಟು 850 ಕ್ಕೂ ಅಧಿಕ ಚೀಲಗಳ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ವಶಪಡಿಸಿಕೊಂಡಿದ್ದು, ಅದರ ಅಂದಾಜು ಮಾರುಕಟ್ಟೆ ಮೌಲ್ಯ ಸುಮಾರು ರೂ.1 ಕೋಟಿ ಆಗಿದೆ. ವಶಪಡಿಸಿಕೊಂಡ ವಸ್ತುಗಳ ಜಿ.ಎಸ್.ಟಿ ನಿಯಮಾವಳಿ ಉಲ್ಲಂಘನೆಯ ಸ್ವರೂಪವನ್ನು ಖಚಿತಪಡಿಸಲು ಪರಿಶೀಲನಾ ಪ್ರಕ್ರಿಯೆ ಮುಂದುವರಿದಿದೆ. ಪ್ರಾಥಮಿಕ ತನಿಖೆಯಲ್ಲಿ, ಈ ವಸ್ತುಗಳನ್ನು ಜಿ.ಎಸ್.ಟಿ ನಿಯಮಗಳ ಅನುಸಾರ ಖರೀದಿ ಮಾಡದೇ ಸಾಗಾಟ ಮಾಡಿರುವುದು ಪತ್ತೆಯಾಗಿದ್ದು, ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಗಣನೀಯ ಪ್ರಮಾಣದ ರಾಜಸ್ವ ನಷ್ಟ ಸಂಭವಿಸಿರುವ ಸಾಧ್ಯತೆಗಳಿವೆ.

ಸೂಕ್ತ ದಾಖಲೆಗಳಿಲ್ಲದೆ ಹಾಗೂ ತೆರಿಗೆ ಇನ್ವಾಯ್ಸ್‍ಗಳಿಲ್ಲದೆ ಸರಕುಗಳನ್ನು ಸಾಗಿಸುವ ಅನಧಿಕೃತ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸದಾ ಕಟಿಬದ್ಧವಾಗಿದೆ. ಇಂತಹ ಕಾರ್ಯಾಚರಣೆಗಳು ಸರ್ಕಾರದ ಆದಾಯವನ್ನು ರಕ್ಷಿಸುವುದರ ಜೊತೆಗೆ ಜಿಎಸ್‍ಟಿ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಟನಕ್ಕೆ ಇಲಾಖೆ ಕೈಗೊಂಡಿರುವ ನಿರಂತರ ಪ್ರಯತ್ನಗಳ ಭಾಗವಾಗಿದೆ ಎಂದು ಬೆಂಗಳೂರು ದಕ್ಷಿಣ ವಲಯದ ವಾಣಿಜ್ಯ ತೆರಿಗೆಗಳ ಅಪರ ಆಯುಕ್ತರಾದ (ಜಾರಿ) ಕನಿಷ್ಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.