Live Stream

[ytplayer id=’22727′]

| Latest Version 8.0.1 |

Bengaluru Urban

ವಿಧಾನಸಭೆಯಲ್ಲಿ ವಿಧೇಯಕಗಳ ಅಂಗೀಕಾರ

ವಿಧಾನಸಭೆಯಲ್ಲಿ ವಿಧೇಯಕಗಳ ಅಂಗೀಕಾರ

ಬೆಂಗಳೂರು,ಆಗಸ್ಟ್ 13 (ಕರ್ನಾಟಕ ವಾರ್ತೆ) 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕವನ್ನು ಉಪಮುಖ್ಯಮಂತ್ರಿಗಳ ಪರವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯಲ್ಲಿ  ಅಂಗೀಕರಿಸಲು ಕೋರಿದರು.  ವಿಧೇಯಕವು ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

2025ನೇ ಸಾಲಿನ ಬಸವ ಕಲ್ಯಾಣ ಅಭಿವೃದ್ದಿ ಮಂಡಳಿ (ತಿದ್ದುಪಡಿ) ವಿಧೇಯಕವನ್ನು  ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

2025ನೇ ಸಾಲಿನ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

2025ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

2025ನೇ ಸಾಲಿನ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು

2025ನೇ ಸಾಲಿನ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು

2025ನೇ ಸಾಲಿನ ಬನವಾಸಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು

2025ನೇ ಸಾಲಿನ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ  ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

2025ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ)   ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

2025ನೇ ಸಾಲಿನ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ-2025 ಅಂಗೀಕಾರ

2025ನೇ ಸಾಲಿನ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು.

ಕಂದಾಯ ಸಚಿವರು 2025ನೇ ಸಾಲಿನ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು  ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ. ಈ ವಿಧೇಯಕವು ಸಾರ್ವಜನಿಕ ಹಿತದೃಷ್ಟಿಯಿಂದ ಸಬ್ ರಿಜಿಸ್ಟ್ರಾರರು ಸ್ವತ್ತಿನ  ನೋಂದಣಿ ಸಮಯದಲ್ಲಿ ಕೈಗೊಳ್ಳಬೇಕಾದ ಯುಕ್ತ ಕಾರ್ಯ ತತ್ಪರತೆಯನ್ನು ಖಚಿತಪಡಿಸಬೇಕಾಗುತ್ತಿದೆ. ನಗರ ಪ್ರದೇಶಗಳಲ್ಲಿ ಸ್ವತ್ತುಗಳ ಕಾನೂನು ಬಾಹಿರ ನೋಂದಣಿಯನ್ನು ತಡೆಯಲು ಮತ್ತು ಸ್ವತ್ತಿನ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಲು ಸ್ವತ್ತು ತಂತ್ರಾಂಶಗಳನ್ನು ಸಂಯೋಜಿಸಲು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಪಕ್ಷಕಾರರು ಖುದ್ದಾಗಿ ಹಾಜರಾಗದೆ ಕೆಲವು ಕಡ್ಡಾಯ ನೋಂದಣಿಯಾಗಬೇಕಾದ ದಸ್ತಾವೇಜುಗಳ ಇ-ನೋಂದಣಿ/ರಿಮೋಟ್ ನೋಂದಣಿಯನ್ನು ಜಾರಿಗೊಳಿಸಲು ಮತ್ತು ವಿಳಂಬವನ್ನು ತಪ್ಪಿಸಲು ಕೇಂದ್ರೀಕೃತ ವರ್ಚುವಲ್ ವಿತರಣಾ ವ್ಯವಸ್ಥೆಯ ಮೂಲಕ ಪ್ರಮಾಣೀಕೃತ ಪ್ರತಿಗಳನ್ನು  ಲಭ್ಯವಾಗುವಂತೆ ಮಾಡಲು ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ವಿಧೇಯಕದ ಕುರಿತು ಸದನಕ್ಕೆ ವಿವರಿಸಿ ವಿಧೇಯಕಯವನ್ನು ಪರ್ಯಾಲೋಚಿಸಿ ಅಂಗೀಕರಿಸಬೇಕೆಂದು ಕೋರಿದರು. ಸದನದಲ್ಲಿ ಸಚಿವರು ಹಾಗೂ ಶಾಸಕರು ವಿಧೇಯಕದ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದರು.  ವಿಧೇಯಕವು ಸರ್ವಾನುಮತದಿಂದ ಅಂಗೀಕಾರಗೊಂಡಿತು.

NEWS HEADLINES : VK DIGITAL : 13-8-2025

ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";