Live Stream

[ytplayer id=’22727′]

| Latest Version 8.0.1 |

State News

ಶಾಂತಿ ಸುರಕ್ಷತೆ, ಕಾಪಾಡಲು ಪೊಲೀಸರ ಪಾತ್ರ ಮಹತ್ತರವಾದದ್ದು- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಶಾಂತಿ ಸುರಕ್ಷತೆ, ಕಾಪಾಡಲು ಪೊಲೀಸರ ಪಾತ್ರ ಮಹತ್ತರವಾದದ್ದು- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ರಾಜ್ಯ, ರಾಷ್ಟ್ರಗಳಲ್ಲಿ ಶಾಂತಿ, ಸುರಕ್ಷತೆ ಕಾಪಾಡಲು ಪೊಲೀಸರ ಪರಿಶ್ರಮ ಮಹತ್ತರವಾದದ್ದು. ಇವರು ಸೇವೆ, ಸಂಕಲ್ಪ, ನಿಷ್ಠೆ, ಸಾಹಸದಿಂದ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಇಂದು ರಾಜಭವನದ ಗಾಜಿನ ಮನೆಯಲ್ಲಿ ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ‘ರಾಷ್ಟ್ರಪತಿಯವರ ಪದಕ ಪ್ರದಾನ ಸಮಾರಂಭ-2025’ ರಲ್ಲಿ ಪೊಲೀಸರಿಗೆ ಪದಕ ಪ್ರದಾನ ಮಾಡಿ ಮಾತನಾಡಿದ ರಾಜ್ಯಪಾಲರು, ಕರ್ನಾಟಕ ಪೊಲೀಸರು ಪ್ರಕರಣಗಳನ್ನು ಬೇಧಿಸುವಲ್ಲಿ ಜನರ ವಿಶ್ವಾಸ ಗಳಿಸಿದ್ದಾರೆ. ಎಂಥಹ ಕಠಿಣ ಪರಿಸ್ಥಿತಿಯಲ್ಲೂ ಕಾನೂನು ರಕ್ಷಣೆ ಮಾಡಿ, ಜನರಿಗೆ ನ್ಯಾಯ ಕೊಡಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ. ಇತ್ತೀಚೆಗೆ ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳನ್ನು ತಡೆಯಲು ಸಹ ಪೊಲೀಸರು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಪದಕಗಳ ಹಿಂದೆ ಪರಿಶ್ರಮ, ಪ್ರಾಮಾಣಿಕತೆ, ಸಾಮಾಜಿಕ ಕಳಕಳಿ ಇದೆ – ಮುಖ್ಯಮಂತ್ರಿ ಸಿದ್ದರಾಮಯ್ಯ
ಸೇವಾ ಪದಕಗಳ ಹಿಂದೆ ಪರಿಶ್ರಮ, ಪ್ರಾಮಾಣಿಕತೆ, ಸಾಮಾಜಿಕ ಕಳಕಳಿ ಇದೆ. ಶಾಂತಿ, ಆಸ್ತಿ, ಜೀವ, ಮಾನ ರಕ್ಷಣೆ ಮಾಡುವ ಪೊಲೀಸರ ಜವಾಬ್ದಾರಿ ಬಹಳ ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಸಮಾಜದಲ್ಲಿ ಅನೇಕ ರೀತಿಯ ಅಪರಾಧಗಳು ನಡೆಯುತ್ತವೆ. ಈ ಅಪರಾಧಗಳ ಸಂಖ್ಯೆ ಕಡಿಮೆ ಮಾಡುವುದು ಸರ್ಕಾರ ಹಾಗೂ ಪೊಲೀಸರ ಜವಾಬ್ದಾರಿಯಾಗಿದೆ. ಅಪರಾಧಗಳನ್ನು ಆದಷ್ಟೂ ಕಡಿಮೆ ಮಾಡುವ ನಿಟ್ಟಿನಲ್ಲಿ ನಾವು  ನಿಗಾ ವಹಿಸಬೇಕು. ಅವುಗಳನ್ನು ತಡೆಯುವಲ್ಲಿ ಮುಂಜಾಗ್ರತಾ ಕ್ರಮಗಳನ್ನು ಸಹ ವಹಿಸಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ನೆಲೆಸಿರುವ ಅಸಮಾನತೆಯನ್ನು ತೊಡೆದು ಹಾಕಿ ದುರ್ಬಲ ಜನರ ಹಕ್ಕುಗಳ ರಕ್ಷಣೆಗೆ ಪೊಲೀಸರು ಮುಂದಾಗಬೇಕು. ದುರ್ಬಲ ವರ್ಗದವರ ರಕ್ಷಣೆಗೆ ಸರ್ಕಾರ ಸಹ ನಿಲ್ಲಬೇಕು. ಸರ್ಕಾರ ಪ್ರತಿ  ಜಿಲ್ಲೆಯಲ್ಲಿ ಡಿಸಿಆರ್‍ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ಆದರೆ ಇತ್ತೀಚೆಗೆ ನಡೆಸಲಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಪೊಲೀಸ್ ಠಾಣೆಗಳ ಕಾರ್ಯನಿರ್ವಹಣೆ ತೃಪ್ತಿದಾಯಕವಾಗಿಲ್ಲ ಎಂದು ಕಂಡು ಬಂದಿದೆ. ಇದನ್ನು ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ದುರ್ಬಲ, ಪರಿಶಿಷ್ಟ ಜಾತಿ, ಪಂಗಡಗಳ ಪರವಾಗಿ ನ್ಯಾಯ ಕೊಡಿಸಬೇಕೆಂದರು. ಅಲ್ಲದೆ ಪೊಲೀಸರು ಆತ್ಮತೃಪ್ತಿಯಿಂದ ಕೆಲಸ ನಿರ್ವಹಿಸಬೇಕೆಂದು ಕಿವಿಮಾತು ಹೇಳಿದರು.
ನಂತರ ಮಾನ್ಯ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪಕದ ಸೇರಿದಂತೆ ವಿವಿಧ ಪದಕಗಳನ್ನು ತಮ್ಮ ಮುಡಿಗೇರಿಸಿಕೊಂಡ ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆಗಳನ್ನು ಸಲ್ಲಿಸಿದರು.
ಸೇವಾ ಪದಕ ಬರಿ ಪದಕವಲ್ಲ, ಮುಂದಿನ ಪೀಳಿಗೆಗೆ ದೊರೆಯುವ ಆದರ್ಶ – ಗೃಹ ಸಚಿವ ಡಾ. ಜಿ. ಪರಮೇಶ್ವರ
ಪೊಲೀಸರಿಗೆ ದೊರೆತಿರುವ ಪದಕದ ಹಿಂದೆ, ಅವರ ಶ್ರಮ, ಪ್ರಾಮಾಣಿಕತೆ, ಸಮಾಜಸೇವೆ, ನಿಷ್ಠೆ ಇದೆ. ಇದು ಬರಿಯ ಪದಕವಲ್ಲ. ಇದು ಮುಂದಿನ ಪೀಳಿಗೆಗೆ ದೊರೆಯುವ ಆದರ್ಶ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.
ಕರ್ನಾಟಕ ಪೊಲೀಸ್ ಪಡೆ ರಾಷ್ಟ್ರದಲ್ಲಿಯೇ ಹೆಸರುವಾಸಿಯಾಗಿದೆ. ಜನ ಸಾಮಾನ್ಯರ ನಿರೀಕ್ಷೆಗೆ ತಕ್ಕಂತೆ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಇತ್ತೀಚೆಗೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯದಲ್ಲಿ ಹತ್ತೂವರೆ ಲಕ್ಷ ಕೋಟಿ ಬಂಡಾವಳ ಹೂಡಿಕೆಯಾಗಿದ್ದು ಹೆಮ್ಮೆಯ ಸಂಗತಿ.
ರಾಜ್ಯದಲ್ಲಿ ಶಾಂತಿ, ನೆಮ್ಮದಿ ಇದೆ. ಇದರ ಹಿಂದೆ ಪೊಲೀಸರ ಶ್ರಮ ದೊಡ್ಡದು. ರಾಜ್ಯದ ಪೊಲೀಸ್ ಇಲಾಖೆ ಆಧುನೀಕರಣಗೊಂಡಿದೆ. ಇತ್ತೀಚೆಗೆ ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳನ್ನು ತಡೆಯಲು ರಾಜ್ಯದಲ್ಲಿ 45 ಪ್ರತ್ಯೇಕ ಸೈಬರ್ ಠಾಣೆಗಳನ್ನು ತೆರೆಯಲಾಗಿದೆ. ಜಿಲ್ಲೆಗಳಲ್ಲಿ ದಾಖಲಾಗುವ ಸೈಬರ್ ಪ್ರಕರಣಗಳನ್ನು ಈ ಠಾಣೆಗಳಿಗೆ ರವಾನಿಸಬಹುದಾಗಿದೆ. ಇತ್ತೀಚೆಗೆ ಸಮಾಜದಲ್ಲಿ ಧಾರ್ಮಿಕ, ರಾಜಕೀಯವಾಗಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಪ್ರಯತ್ನ ಕೆಲವರಿಂದ ನಡೆಯುತ್ತಿದೆ ಎಂದರು.


ಕಳೆದ 2 ವರ್ಷಗಳಿಂದ ಪೊಲೀಸ್ ಇಲಾಖೆ ಕೊಲೆ ಪ್ರಕರಣಗಳನ್ನು ಶೇ.99ರಷ್ಟು ಬೇಧಿಸುವಲ್ಲಿ ಸಫಲವಾಗಿದೆ. ಜನರ, ಇತರ ರಾಜಕಾರಣಿಗಳ ಟೀಕೆ, ಟಿಪ್ಪಣಿ ನಡುವೆಯೂ ಇಲಾಖೆ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದ್ದು, ಟೀಕೆಗಳನ್ನು ಸಲಹೆ ರೂಪದಲ್ಲಿ ತೆಗೆದುಕೊಳ್ಳಲಾಗಿದೆ. ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಪೇದೆಗಳು ಸಹ ಮುಖ್ಯವೆನಿಸುತ್ತಾರೆ ಎಂದ ಅವರು, ಎಲ್ಲಿ ಪ್ರಾಮಾಣಿಕತೆ ಇರುತ್ತದೆಯೊ ಅಲ್ಲಿ ಅಭಿವೃದ್ಧಿಯಾಗುತ್ತದೆ ಎಂದರು.
ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುವಾಗ ಹಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಕೆಲವೊಮ್ಮೆ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಕೆಲಸ ನಿರ್ವಹಿಸುವ ಸಂದರ್ಭ ಬರುತ್ತದೆ. ಎಷ್ಟೋ ಪೊಲೀಸರು ಕರ್ತವ್ಯದ ವೇಳೆ ಪ್ರಾಣ ತ್ಯಾಗ ಸಹ ಮಾಡಿದ್ದಾರೆ. ಇವರ ನಿಸ್ವಾರ್ಥ ಸೇವೆ ಇತರರಿಗೆ ಮುಂದಿನ ಪೀಳಿಗೆಗೆ ಮಾದರಿಯಾಗಬೇಕೆಂದರು.
ಸಮಾರಂಭದಲ್ಲಿ ವಿಶಿಷ್ಟ ಸೇವೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ, 2022 ಮತ್ತು 2023ನೇ ಸಾಲಿನ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ, ಪೊಲೀಸ್ ಶೌರ್ಯ ಪದಕ ಹಾಗೂ ಪೊಲೀಸ್ ವಿಶಿಷ್ಟ ಸೇವಾ ಪದಕ ಪಡೆದಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಸಮಾರಂಭದಲ್ಲಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ಒಡಾಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್ ಸೇರಿದಂತೆ ಪೊಲೀಸ್ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.

ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";