ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಮಾಜಿ ಸಭಾಪತಿ ಎನ್. ತಿಪ್ಪಣ್ಣ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ತಿಪ್ಪಣ್ಣ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಕೂಡ ಭಾಗವಹಿಸಿದ್ದರು. ಇಳಿ ವಯಸ್ಸಿನಲ್ಲೂ ತಮ್ಮ ಕೆಲಸಗಳಿಂದಲೇ ಜನರ ಮನಗೆದ್ದಿದ್ದ ಇವರು, 30 ವರ್ಷಗಳ ಕಾಲ ವಕೀಲ ವೃತ್ತಿ ಮಾಡಿ ನಂತರ ರಾಜ್ಯ ವಕೀಲರ ಸಂಘದ ಅಧ್ಯಕ್ಷರಾಗಿ, ವಿಧಾನ ಪರಿಷತ್ತಿನ ಸದಸ್ಯರಾಗಿ, ಸಭಾಪತಿಯಾಗಿ, ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಎಂದು ಅವರು ತಿಳಿಸಿದ್ದಾರೆ.
ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ತಿಪ್ಪಣ್ಣ ಅವರಿಗೆ 2022 ರಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು ಎಂದು ಅವರು ತಿಳಿಸಿದ್ದಾರೆ. ಮೃತರ ಕುಟುಂಬ, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
Veekay News > State News > ಮಾಜಿ ಸಭಾಪತಿ ಎನ್.ತಿಪ್ಪಣ್ಣ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ
ಮಾಜಿ ಸಭಾಪತಿ ಎನ್.ತಿಪ್ಪಣ್ಣ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ
ವೀ ಕೇ ನ್ಯೂಸ್11/07/2025
posted on
