ಬೆಂಗಳೂರು, ಜೂ, 21; ಯೋಗ ಆಸನವಷ್ಟೇ ಅಲ್ಲದೇ ಬದುಕಿನಲ್ಲಿ ಸಂತಸದಿಂದ, ಸಮಾಧಾನದಿಂದ ಇರುವುದು ಕೂಡ ಒಂದು ಬಗೆಯ ಯೋಗ ಎಂದು ಯೋಗ ಗುರುಜಿ ಕೆ. ಎ. ಶಂಕರ್ ಹೇಳಿದ್ದಾರೆ.
ಎಪಿಎಸ್ ಶಿಕ್ಷಣ ಸಂಸ್ಥೆಗಳಿಂದ ಸೋಮನಹಳ್ಳಿಯ ಅನಂತ ಜ್ಙಾನ ಗ್ನಾನ ಗಂಗೋತ್ರಿ ಕ್ಯಾಂಪಸ್ನಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿಯೊಬ್ಬರೂ ಜೀವನದಲ್ಲಿ ಯೋಗದ ಮಹತ್ವ ಅರಿತು, ಪ್ರತಿನಿತ್ಯ ಯೋಗಾಸನ ಮಾಡಬೇಕು. ಇದರಿಂದ ಮಾನಸಿಕ, ದೈಹಿಕ ಆರೋಗ್ಯ ಸುಧಾರಿಸಲಿದೆ ಎಂದರು.

ಎಪಿಎಸ್ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ವಿಶ್ಣು ಭರತ್ ಆಲಂಪಲ್ಲಿ ಮಾತನಾಡಿ, ಶೈಕ್ಷಣಿಕ ಶ್ರೇಷ್ಠತೆಯ ಜೊತೆಗೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಯೋಗದಂತಹ ಸಾಂಪ್ರದಾಯಿಕ ಅಭ್ಯಾಸಗಳಲ್ಲಿ ಭಾಗವಹಿಸಲು ನಮ್ಮ ಸಂಸ್ಥೆಯಲ್ಲಿ ಪ್ರೋತ್ಸಾಹ ನೀಡಲಾಗುತ್ತಿದೆ. ಅಂತರಾಷ್ಟ್ರೀಯ ಯೋಗ ದಿನದ ಆಚರಣೆಯಿಂದ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಪೋಷಿಸಲಿವೆ. ವಿದ್ಯಾರ್ಥಿಗಳಿಗೆ ಆರೋಗ್ಯಕರ ಜೀವನ ನಡೆಸಲು ಅಗತ್ಯವಿರುವ ಸಾಧನಗಳನ್ನು ಒದಗಿಸುವ ಗುರಿ ಹೊಂದಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನದಲ್ಲಿ ಭಾಗವಹಿಸಿದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರೊ. ಎ. ಪ್ರಕಾಶ್, ಟ್ರಸ್ಟಿ ಎ. ರಾಮಪ್ರಸಾದ್ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.





















