Live Stream

[ytplayer id=’22727′]

| Latest Version 8.0.1 |

State News

ನಿಮ್ಮ ಪಕ್ಷಕ್ಕೆ ದಮ್ಮು ತಾಕತ್ ಇದ್ದರೆ ದಲಿತ ನಾಯಕರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ: ಸಿಎಂ

ನಿಮ್ಮ ಪಕ್ಷಕ್ಕೆ ದಮ್ಮು ತಾಕತ್ ಇದ್ದರೆ ದಲಿತ ನಾಯಕರನ್ನು  ರಾಜ್ಯಾಧ್ಯಕ್ಷರನ್ನಾಗಿ ಮಾಡಿ: ಸಿಎಂ

ಬೆಂಗಳೂರು: ಕಾಂಗ್ರೆಸ್ ಪ್ರಧಾನಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೀಡಿರೋ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ,
ಮಾಧ್ಯಮ ಪ್ರಕಟನೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸಕತ್ತಾಗಿಯೇ ಕೌಂಟರ್ ಕೊಟ್ಟಿದ್ದಾರೆ, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಂದು ಸಲಹೆ ನೀಡುತ್ತಿರುವುದ ಅವರು ಅಜ್ಞಾನ ಮತ್ತು ಅತ್ಮವಂಚನೆಯನ್ನು ಮಾತ್ರವಲ್ಲ, ದುರಹಂಕಾರವನ್ನೂ ಸೂಚಿಸುತ್ತದೆ ಎಂದು ಸಿಎಂ ಕಿಡಿಕಾರಿದ್ದಾರೆ,
ಹಿಂದುಳಿದ ನಾಯಕರನ್ನು ಬಿಜೆಪಿ ಹೇಗೆ ನಡೆಸಿಕೊಳ್ಳುತ್ತಾ ಬಂದಿದೆ ಎನ್ನುವುದಕ್ಕೆ ರಾಜ್ಯದ ಹಿಂದುಳಿದ ಜಾತಿಗಳ ನಾಯಕ ಎಸ್ ಬಂಗಾರಪ್ಪನವರೇ ಸಾಕ್ಷಿ, ಬಂಗಾರಪ್ಪನವರನ್ನು ನಿಮ್ಮ ತಂದೆ ಬಿ ಎಸ್ ಯಡಿಯೂರಪ್ಪನವರು ಮುಗಿಸಿದರೆ, ಅವರ ಮಗ ಕುಮಾರ್ ಬಂಗಾರಪ್ಪನವರ ರಾಜಕೀಯವನ್ನು ನೀವು ಮುಗಿಸಲು ಹೊರಟಿದ್ದೀರಿ, ಇದರ ವಿವರವನ್ನು ಅವರು ನೀಡುತ್ತಲೇ ಇದ್ದಾರೆ, ಬಂಗಾರಪ್ಪನವರಿರಲಿ, ನರೇಂದ್ರ ಮೋದಿ ಅವರೇ ಇರಲಿ, ಎಲ್ಲಿಯ ವರೆಗೆ ಇವರು ವರ್ಣವ್ಯವಸ್ಧೆ ಆಧಾರಿತ ಹಿಂದುತ್ವದ ಅಜೆಂಡಾಕ್ಕೆ ತಲೆ ಬಗ್ಗಿಸುತ್ತಾ ಇರುತ್ತಾರೋ ಅಲ್ಲಿಯ ವರೆಗೆ ಮಾತ್ರ ಅವರ ತಲೆಗಳು ಸುರಕ್ಷಿತ, ಇದು ಮೋದಿಯವರಿಗೂ ತಿಳಿದಿರಲಿ ಎಂದು ಟಾಂಗ್ ನೀಡಿದ್ದಾರೆ,
ವಿಜಯೇಂದ್ರ ಅವರೇ ದಲಿತ ಮತ್ತು ಹಿಂದುಳಿದ ಜಾತಿಗಳ ಬಗ್ಗೆ ನಿಮಗೆ ಅಷ್ಟೊಂದು ಅಕ್ಕರೆ, ಕಾಳಜಿಗಳಿದ್ದರೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಧಾನವನ್ನು ಒಬ್ಬ ದಲಿತ ನಾಯಕನಿಗೆ ಬಿಟ್ಟುಬಿಡಿ, ನಿಮಗೆ ಆ ಹೆಸರನ್ನು ನಾನೇ ಸೂಚಿಸುತ್ತೇನೆ, ದಲಿತ ನಾಯಕ ಗೋವಿಂದಪ್ಪ ಕಾರಜೋಳ ಅವರು ಇತ್ತೀಚೆಗೆ ನಿಮ್ಮ ಸಂಗಕ್ಕೆ ಬಿದ್ದು ಏನೇನೋ ಮಾತನಾಡುತ್ತಿದ್ದಾರೆ, ಅದರೆ ನನ್ನ ಸಹದ್ಯೋಗಿಯಾಗಿದ್ದ ಅವರು ಮೂಲತಃ ಸಜ್ಜನ ವ್ಯಕ್ತಿ, ನಿಮಗೆ ನಿಮ್ಮ ಪಕ್ಷಕ್ಕೆ ದಮ್ಮು ತಾಕತ್ ಇದ್ದಾರೆ ಕಾರಜೋಳ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಅವರನ್ನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಬಿಡಿ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ,

ವೀ ಕೇ ನ್ಯೂಸ್
";